ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 17ರಂದು ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ವಿವಿ ಕುಲಪತಿ ಪ್ರೊ. ಶ್ರೀನಿವಾಸ ಬಳ್ಳಿ ಮಂಗಳವಾರದಂದು ನಡೆದ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
46 ಕ್ಕೂ ಅಧಿಕ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಬ್ಯಾಂಕ್, ತಂತ್ರಜ್ಞಾನ, ಸಾಫ್ಟ್ವೇರ್ ಸೇರಿದಂತೆ ವಿವಿಧ ಮಾದರಿಯ 3,200ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಡಿಸೆಂಬರ್ 17ರ ಬೆಳಗ್ಗೆ 9:30 ರಿಂದ ಸಂಜೆ 4:00 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ.
ನೋಂದಣಿ ಮತ್ತು ಸಂದರ್ಶನ ಉಚಿತವಾಗಿದ್ದು, ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ವಿನಿಮಯ ಕಚೇರಿ, ಬೆಂಗಳೂರು ಅಥವಾ ಉದ್ಯೋಗ ಕೋಶದ ಮುಖ್ಯಸ್ಥರು, ನೃಪತುಂಗ ವಿಶ್ವವಿದ್ಯಾಲಯ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.