alex Certify ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ ನಡೆ

ಬೆಂಗಳೂರು: ನಾಳೆ ಗದಗದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗುವುದಿಲ್ಲ.

ಕಚೇರಿ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ. ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಗದಗ ಕಾರ್ಯಕ್ರಮಕ್ಕೆ ಯಡಿಯೂರಪ್ಪ ತೆರಳುವುದಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಈಗಾಗಲೇ ಮಾಹಿತಿ ನೀಡಿದ್ದಾರೆ. ಬಿಜೆಪಿ ಪಾಳಯದಲ್ಲಿ ಯಡಿಯೂರಪ್ಪ ಅವರ ನಡೆ ಕುತೂಹಲ ಮೂಡಿಸಿದೆ ಎನ್ನಲಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ನಾಳಿನ ಕಾರ್ಯಕ್ರಮದ ಬಗ್ಗೆ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದುವರೆಗೂ ಯಡಿಯೂರಪ್ಪ ಪ್ರವಾಸದ ಪಟ್ಟಿ ಬಿಡುಗಡೆ ಮಾಡಿಲ್ಲ. ಈವರೆಗಿನ ಮಾಹಿತಿಯ ಪ್ರಕಾರ ನಾಳೆ ಯಾವುದೇ ಕಾರ್ಯಕ್ರಮ ನಿಗದಿಯಾಗಿಲ್ಲ. ನಾಳೆ ಅವರು ಬೆಂಗಳೂರಿನಲ್ಲಿಯೇ ಇರಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಕರ್ನಾಟಕ ಬಿಜೆಪಿಯ ಸರ್ವೋಚ್ಛ ನಾಯಕರಾಗಿದ್ದಾರೆ. ಅವರನ್ನು ಕಡೆಗಣಿಸುವ ಮಾತೇ ಇಲ್ಲ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...