ವಿಜಯನಗರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮುನ್ನೆಲೆಗೆ ಬಂದಿದೆ. ಈ ಹಿಂದೆ ಉಮೇಶ್ ಕತ್ತಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೇಳಿದ್ದರು. ಅವರ ನಿಧನದ ಬಳಿಕ ಈ ಚರ್ಚೆ ತಣ್ಣಗಾಗಿತ್ತು. ಆದರೆ ಈಗ ಸಚಿವ ಆನಂದ್ ಸಿಂಗ್ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ರಾಜಧಾನಿಯಾಗುತ್ತದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಹೊಸಪೇಟೆ ತಾಲೂಕಿನ ಭಟ್ಟರಹಳ್ಳಿಯಲ್ಲಿ ಆನಂದ್ ಸಿಂಗ್ ಬಿಜೆಪಿ ಕಚೇರಿ ಶಂಕುಸ್ಥಾಪನೆ ವೇಳೆ ತಿಳಿಸಿದ್ದಾರೆ.
ಈ ಮೂಲಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ತಿಳಿಸಿದ್ದಾರೆ.