
ಬೆಂಗಳೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತವಾಗಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಒಂದರಿಂದ ಎಂಟನೇ ತರಗತಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಇದನ್ನು ಸ್ಥಗಿತಗೊಳಿಸಿಲ್ಲ ಎಂದು ಹೇಳಿದ್ದಾರೆ. ಈ ಯೋಜನೆ ಸಂಪೂರ್ಣ ರಾಜ್ಯ ವಲಯದ ಯೋಜನೆಯಾಗಿದ್ದು, ಮುಂದುವರೆಯಲಿದೆ. ಕೇಂದ್ರ ಸರ್ಕಾರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ ಎಂದು ಗೊಂದಲ ಸೃಷ್ಟಿಸಲಾಗುತ್ತಿದೆ. ಮೆಟ್ರಿಕ್ ಪೂರ್ವದ ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶೇಕಡ 100ರಷ್ಟು ವಿದ್ಯಾರ್ಥಿ ವೇತನ ನೀಡುತ್ತಿದೆ ಇದನ್ನು ಸ್ಥಗಿತಗೊಳಿಸಿಲ್ಲ ಎಂದು ಹೇಳಿದ್ದಾರೆ.
9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶೇಕಡ 60ರಷ್ಟು ಕೇಂದ್ರ ಸರ್ಕಾರ, ಶೇಕಡ 40ರಷ್ಟು ರಾಜ್ಯ ಸರ್ಕಾರ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಯಾವುದೇ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.