ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯೊಬ್ಬರು 5ನೇ ತರಗತಿ ವಿದ್ಯಾರ್ಥಿನಿಯನ್ನು ಮೊದಲ ಮಹಡಿಯಿಂದ ಎಸೆದಿದ್ದಾರೆ.
ಮಾಡೆಲ್ ಬಸ್ತಿ ಪ್ರದೇಶದ ಮಹಾನಗರ ಪಾಲಿಕೆಗೆ ಒಳಪಟ್ಟ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯನ್ನು ಶಿಕ್ಷಕಿ ಗೀತಾ ದೇಶ್ವಾಲ್ ಎಂಬವರು ಕೆಳಗೆಸದಿದ್ದು, ಇದರಿಂದಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿ ಶಿಕ್ಷಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅಲ್ಲದೆ ಆಕೆಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿರುವ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.