ಬೆಂಗಳೂರು: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ಹಫ್ತಾ ನೀಡದ ಕಾರಣ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದಾರೆ.
ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನಿಸಲಾಗಿದೆ. ಬಾಣಸವಾಡಿಯ ಜೈಭಾರತ್ ನಗರದಲ್ಲಿ ಘಟನೆ ನಡೆದಿದೆ. ಸುರೇಶ್ ಎಂಬಾತ ಹಫ್ತಾ ಕೇಳಿದ್ದು, ಕೊಡದ ಕಾರಣ ಲಾಂಗ್ ಬೀಸಿ ಆತನನ್ನು ಬೆದರಿಸಿ ಪುಡಿರೌಡಿಗಳು ಪುಂಡಾಟಿಕೆ ಮೆರೆದಿದ್ದಾರೆ. ನಿನ್ನೆ ರಾತ್ರಿ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಬಾಣಸವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.