ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ದುರಂತ ಸಂಭವಿಸಿದ್ದು, ಕಾನೂನು ವಿದ್ಯಾರ್ಥಿನಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ವಿ.ವಿ.ಪುರಂ ನಲ್ಲಿರುವ ಇನ್ಸ್ ಟಿ ಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದ 6 ನೇ ಮಹಡಿಯಿಂದ ವಿದ್ಯಾರ್ಥಿನಿ ಜಿಗಿದಿರುವ ಶಂಕೆ ವ್ಯಕ್ತವಾಗಿದೆ.
23 ವರ್ಷದ ವಾಣಿ ಮೃತ ವಿದ್ಯಾರ್ಥಿನಿ. ಮೊದಲ ವರ್ಷದ ಎಲ್ ಎಲ್ ಬಿ ಓದುತ್ತಿದ್ದರು. ಕಾನೂನು ವಿದ್ಯಾರ್ಥಿನಿಯಾಗಿರುವ ವಾಣಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅನುಮಾನಾಸ್ಪದವಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.