ಗದಗ: ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಹಾಗೂ ವಿದ್ಯಾರ್ಥಿ ಭರತ್ ಮೇಲೆ ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಭರತ್ ದಾರುಣವಾಗಿ ಸಾವನ್ನಪ್ಪಿದ್ದಾನೆ
ಶಿಕ್ಷಕ ಮುತ್ತಪ್ಪ ಹಡಗಲಿ ಹುಚ್ಚಾಟಕ್ಕೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.