ಮೈಸೂರು: ರೋಗಿಗಳಿಂದ ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಕುಮಾರಸ್ವಾಮಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ತಾಲೂಕಿನ ಉದ್ದೂರು ಪಿ ಹೆಚ್ ಸಿ ವೈದ್ಯ ಕುಮಾರಸ್ವಾಮಿ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ವೈದ್ಯನ ಹಣದಾಹಕ್ಕೆ ರೋಗಿಗಳು ಬೇಸತ್ತಿದ್ದರು. ಹಣಕ್ಕೆ ಬೇಡಿಕೆ ಇಡುತ್ತಿದ್ದ ವೈದ್ಯನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇದೀಗ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್ ವೈದ್ಯ ಕುಮಾರಸ್ವಾಮಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.