ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ, “ಸುಪೇಲಾದಲ್ಲಿ ನನ್ನ ಮೇಲೆ ಕಲ್ಲು ತೂರಲಾಯಿತು. ಆದರೆ ಕಲ್ಲು ತೂರಾಟಗಾರರು ಛತ್ತೀಸ್‌ಗಢದ ಜನರ ಮೇಲೆ ಕಲ್ಲು ಎಸೆಯುತ್ತಿದ್ದಾರೆ ಎಂಬುದನ್ನು ಮರೆತಿದ್ದಾರೆ. ಅದು ನನ್ನ ಮೇಲೆ ಅಲ್ಲ” ಎಂದು ಚಂದ್ರಾಕರ್ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಒಂದು ನಾಯಿ ಕೂಡ ಸತ್ತಿಲ್ಲ ಎಂದಿದ್ದ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿ ವಿರೋಧಿಸಿದೆ.
ಬಿಜೆಪಿ ಸಭೆಯಲ್ಲಿ ಮಾತನಾಡಿದ ಅಜಯ್ ಚಂದ್ರಕರ್ ಮೇಲೆ ಸುಪೇಲಾದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಬಗ್ಗೆ ಪೊಲೀಸರ ಗಮನಕ್ಕೆ ತಂದರೂ, ಇದುವರೆಗೂ ಆರೋಪಿಗಳ ಗುರುತು ಪತ್ತೆಯಾಗಿಲ್ಲ.