ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಹಠಾತ್ ಉಲ್ಬಣಗೊಳ್ಳುತ್ತಿರುವ ಆತಂಕದ ನಡುವೆ, ಕೇಂದ್ರ ಆರೋಗ್ಯ ಸಚಿವಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದಿದೆ.
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಒತ್ತಾಯಿಸಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪತ್ರ ಬರೆದಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸಲು ಮತ್ತು ಲಸಿಕೆ ಹಾಕಿದ ಜನರು ಮಾತ್ರ ಪಾದಯಾತ್ರೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಲು ಒತ್ತಾಯಿಸಿದ್ದಾರೆ.
ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸುವುದು ಪಕ್ಷಕ್ಕೆ ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹಿತಾಸಕ್ತಿಗಾಗಿ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಸಂಚರಿಸಿದೆ. ಇಂದು ಬೆಳಗ್ಗೆ ರಾಜಸ್ಥಾನದಿಂದ ಹರಿಯಾಣ ಪ್ರವೇಶಿಸಿದೆ.