ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ ನಾಯಕ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕ್ಕಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಉದ್ಧಟತನದ ಹೇಳಿಕೆ ಕೊಟ್ಟಿದ್ದಾರೆ.
ಮಾತುಕತೆಯ ಮೂಲಕ ವಿವಾದ ಇತ್ಯರ್ಥಕ್ಕೆ ಬಯಸುತ್ತೇವೆ. ಆದರೆ ಕರ್ನಾಟಕದ ಸಿಎಂ ಕಿಡಿ ಹೊತ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಕಿಡಿಕಾರಿರುವ ರಾವತ್, ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿವಾದ ಕುರಿತು ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಹೇಳಿದ್ದಾರೆ.