ಹುಬ್ಬಳ್ಳಿ: ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಸಹ ಶಿಕ್ಷಕಿ ಗೀತಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಡಿ.19ರಂದು ಗದಗ ಜಿಲ್ಲೆಯ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಸಹ ಶಿಕ್ಷಕಿ ಗೀತಾ ಹಾಗೂ ಆಕೆಯ 10 ವರ್ಷದ ಮಗ ಭರತ್ ಮೇಲೆ ಸಲಾಕೆಯಿಂದ ಮನಬಂದಂತೆ ಹಲ್ಲೆ ನಡೆಸಿದ್ದ.
ಶಿಕ್ಷಕನ ಏಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಭರತ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಾಯಾಳು ಗೀತಾಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಗೀತಾ ಇಂದು ಕೊನೆಯುಸಿರೆಳೆದಿದ್ದಾರೆ. ಡಿಸೆಂಬರ್ 20ರಂದು ಆರೋಪಿ ಶಿಕ್ಷಕ ಮುತ್ತಪ್ಪನನ್ನು ಗದಗ ಪೊಲೀಸರು ಬಂಧಿಸಿದ್ದರು.