alex Certify BIG NEWS: ಪಂಚಮಸಾಲಿ 2ಎ ಮೀಸಲಾತಿಗೆ ಒತ್ತಾಯ; ಸುವರ್ಣ ವಿಧಾನಸೌಧದ ಬಳಿ ವಿರಾಟ್ ಸಮಾವೇಶ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ 2ಎ ಮೀಸಲಾತಿಗೆ ಒತ್ತಾಯ; ಸುವರ್ಣ ವಿಧಾನಸೌಧದ ಬಳಿ ವಿರಾಟ್ ಸಮಾವೇಶ ಆರಂಭ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿಯ ಕಮಕಾರಹಟ್ಟಿಯಲ್ಲಿ ಹಮ್ಮಿಕೊಂಡಿರುವ ವಿರಾಟ್ ಸಮಾವೇಶ ಆರಂಭವಾಗಿದೆ.

ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ವಿರಾಟ್ ಸಮಾವೇಶ ಪ್ರಾರಂಭವಾಗಿದೆ. ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಸಮಾವೇಶಕ್ಕೆ ಆಗಮಿಸಿ ಮೀಸಲಾತಿ ಘೋಷಿಸಲಿ ಎಂದು ಪಂಚಮಸಾಲಿ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ. ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ 2ಎ ಮೀಸಲಾತಿ ಘೋಷಣೆ ಮಾಡಲಿದ್ದಾರಾ ? ಕಾದುನೋಡಬೇಕಿದೆ.

ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ಅರವಿಂದ್ ಬೆಲ್ಲದ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...