ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಹೇಳುವ ಮೂಲಕ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ನನ್ನ ರಾಜಕೀಯ ಜೀವನದ ಬಗ್ಗೆ ಡಿಸೆಂಬರ್ 25ರಂದು ಗೊತ್ತಾಗುತ್ತದೆ. ಯಾರು ಏನು ಹೇಳಿದರು ಮುಂದಿನ ನಡೆ ಏನು ಎಲ್ಲವನ್ನು ಹೇಳುತ್ತೇನೆ ಎಂದಿದ್ದಾರೆ.
ರೆಡ್ಡಿ ಬಿಜೆಪಿಯಲ್ಲಿಯೇ ಇರ್ತಾರೆ, ಈಗಾಗಲೇ ಮಾತನಾಡಿದ್ದೇನೆ ಎಂಬ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜನಾರ್ಧನ ರೆಡ್ಡಿ, ಇನ್ನೆರಡು ದಿನ ಕಾಯಿರಿ. ಭಾನುವಾರ ಟಿವಿ ಮುಂದೆ ಕೂತ್ಕೊಂಡ್ರೆ ಎಲ್ಲವೂ ಗೊತ್ತಾಗುತ್ತೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದ್ದಾರೆ.