ಬೆಳಗಾವಿ: ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ. ಗೌರವಧನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಉತ್ತರ ನೀಡಿದ ಸಚಿವರು, ಮಿನಿ ಅಂಗನವಾಡಿಗಳು ಪೂರ್ಣಾವಧಿಯಲ್ಲಿ ಕಾರ್ಯನಿರ್ವಹಿಸದ ಕಾರಣ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,500 ರೂ. ಗೌರವ ಧನ ನೀಡಲಾಗುತ್ತಿದೆ. ಅವುಗಳನ್ನು ಶೀಘ್ರವೇ ಮೇಲ್ದರ್ಜೆಗೇರಿಸಿ ಪೂರ್ಣಾವಧಿ ಅಂಗನವಾಡಿಗಳಾಗಿ ಮಾಡಲಾಗುವುದು. ಕಾರ್ಯಕರ್ತೆಯರಿಗೆ ಪೂರ್ಣಾವಧಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವಂತೆ 10,000 ರೂ. ಗೌರವಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.