500 ಹಾಗೂ 1000 ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಪೂರ್ಣಗೊಂಡಿದೆ.
ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಜನವರಿ 2ರಂದು ಈ ಕುರಿತ ತೀರ್ಪು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ನ್ಯಾಯಮೂರ್ತಿ ಎಸ್.ಎ. ನಜೀರ್ ಅವರು ಜನವರಿ ನಾಲ್ಕರಂದು ನಿವೃತ್ತರಾಗಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ 2ರಂದು ತೀರ್ಪು ಹೊರಬೀಳುವ ನಿರೀಕ್ಷೆ ಇದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣಿಯನ್ ಮತ್ತು ಬಿ.ವಿ. ನಾಗರತ್ನ ಪೀಠದ ಇತರ ಸದಸ್ಯರಾಗಿದ್ದಾರೆ.