ಬೆಳಗಾವಿ(ಸುವರ್ಣಸೌಧ): ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, 2021 -22ನೇ ಸಾಲಿನಲ್ಲಿ ಸರ್ಕಾರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿರುವ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 42,000 ಮಕ್ಕಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿವೇತನ ತಲುಪಿಲ್ಲ. ಪರಿಶೀಲನೆ ನಡೆಸುತ್ತಿದ್ದು, ಸಮಸ್ಯೆ ಬಗೆಹರಿಸಿ ಶೀಘ್ರವೇ ವಿದ್ಯಾರ್ಥಿವೇತನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 2021 -22 ನೇ ಸಾಲಿನಿಂದ ಎಸ್.ಎಸ್.ಪಿ. ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.