alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. 2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು.

ಸಂಬಂಧಪಟ್ಟ ಸೇವಾ ದರ ಸಂಸ್ಥೆಗಳು ಸದರಿ ಕೇಂದ್ರಗಳನ್ನು ಮುಂದುವರೆಸಲು ಇಚ್ಚೆಪಡದ ಹಿನ್ನಲೆಯಲ್ಲಿ ಅಂತಹ ಕೇಂದ್ರಗಳನ್ನು ಇತರೆ ಆಸಕ್ತಿಯುಳ್ಳ ಸೇವಾ ದರ ಸಂಸ್ಥೆಗಳಿಗೆ ಅಥವಾ ಆದ್ಯತೆ ಮೇರೆಗೆ ರೈತ ಉತ್ಪಾದಕ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರಿ ಆದೇಶವನ್ನು ನೀಡಲಾಗಿದ್ದು, ಅದರನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವರು ಉತ್ತರಿಸಿದ್ದಾರೆ.

ಬೆಳೆಗಳಿಗೆ ಬಾಧಿಸುವ ಕೀಟ ರೋಗ, ಕಳೆ ನಿರ್ವಹಣೆಗೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೀಡೆನಾಶಕಗಳನ್ನು ಶೇ.50ರ ಸಹಾಯಧನದಡಿ ಪ್ರತಿ ಹೆಕ್ಟೇರಿಗೆ 500 ರೂ.ಮೀರದಂತೆ ಪ್ರತಿ ರೈತರಿಗೆ ಪ್ರತಿ ಹಂಗಾಮಿಗೆ ಗರಿಷ್ಟ 2 ಹೆಕ್ಟೇರಿಗೆ ಸೀಮಿತಗೊಳಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಿ ವಿತರಿಸಲಾಗುತ್ತಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...