ಬೆಂಗಳೂರು: ಕೊರೊನಾ ರೂಪಾಂತರಿ BF-7 ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ ರುಪ್ಸಾ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ.
ಇಂದಿನಿಂದ ಅನ್ವಯವಾಗುವಂತೆ ಖಾಸಗಿ ಶಾಲೆಗಳ ಒಕ್ಕೂಟ-ರುಪ್ಸಾ ಹೊಸ ಗೈಡ್ ಲೈನ್ ಜಾರಿಗೊಳಿಸಿದೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ವಿದ್ಯಾರ್ಥಿಗಳಲ್ಲಿ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂದರೆ ವಿದಾರ್ಥಿಗಳಿಗೆ ರಜೆ ನೀಡಬೇಕು.
ಶಾಲೆಗಳಲ್ಲಿ ಎರಡುದಿನಗಳಿಗೊಮ್ಮೆ ಸ್ಯಾನಿಟೈಸ್ ಮಾಡಬೇಕು.
ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ.
ಬೂಸ್ಟರ್ ಡೋಸ್ ಲಸಿಕೆ ಪಡೆದಿರಬೇಕು.
ಶಾಲಾ ಆವರಣದಲ್ಲಿ ಮಕ್ಕಳು ಗುಂಪುಗೂಡುವಂತಿಲ್ಲ.
ಸಾಮಾಜಿಕ ಅಂತರ ಪಾಲನೆ ಕಡ್ಡಾಯ.
ಮಕ್ಕಳು ಆಹಾರ, ನೀರು ಹಂಚಿಕೊಳ್ಳುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.