ತುಮಕೂರು: ಕೊರೊನಾ ರೂಪಾಂತರಿ ವೈರಸ್ BF.7 ಬಹಳ ವೇಗವಾಗಿ ಹರಡುತ್ತಿದ್ದು, ಶೀಘ್ರದಲ್ಲಿಯೇ ರಾಜ್ಯಕ್ಕೂ ಎಂಟ್ರಿ ಕೊಡಬಹುದು ಎಂಬ ಆತಂಕಕಾರಿ ಮಾಹಿತಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಕೋವಿಡ್ ಹೊಸ ತಳಿ BF.7 ಪತ್ತೆಯಾಗಿದ್ದು, ಬಹಳ ವ್ಯಾಪಕವಾಗಿ ಹರಡುತ್ತಿದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಇನ್ನು 2-3 ತಿಂಗಳಲ್ಲಿ ಇಲ್ಲಿಗೂ ಎಂಟ್ರಿ ಕೊಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಮುಂಜಾಗೃತಾ ಕ್ರಮಗಳನ್ನು ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೋವಿಡ್ ನಿಯಂತ್ರಣ, ಮಾರ್ಗಸೂಚಿ ನಿಟ್ಟಿನಲ್ಲಿ ಸೋಮವಾರ ಬೆಳಗಾವಿ ಅಧಿವೇಶನದಲ್ಲಿಯೇ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಮಾಸ್ಕ್, ಬೂಸ್ಟರ್ ಡೋಸ್ ಬಗ್ಗೆ ಈಗಾಗಲೇ ಸಿಎಂ ಬೊಮ್ಮಾಯಿ ಸಲಹೆ ಕೊಟ್ಟಿದ್ದಾರೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.