ಹಾವೇರಿ: ಗುಡಿ ಕೈಗಾರಿಕೆ ವೃತ್ತಿ ನಿರತರಿಗೆ 50,000 ರೂ. ನೀಡುವ ಯೋಜನೆ ಜಾರಿಗೊಳಿಸಲಾಗುವುದು. ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಾರಡಗಿ ವೀರಭದ್ರೇಶ್ವರ ದೇವಾಲಯ ಅವರಣದಲ್ಲಿ ಯಾತ್ರಿ ನಿವಾಸಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ, ಗ್ರಾಮೀಣ ಗುಡಿ ಕೈಗಾರಿಕೆ ಪ್ರೋತ್ಸಾಹಿಸಲು ವಿವಿಧ ವೃತ್ತಿ ಕಸಬುಗಳ ಪುನರ್ಚೇತನಕ್ಕೆ 50,000 ರೂ. ನೆರವು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಕುಂಬಾರ, ಬಡಗಿ, ಕಮ್ಮಾರ ಸೇರಿದಂತೆ 15 ವೃತ್ತಿ ಕಸುಬುಗಳನ್ನು ಗುರುತಿಸಲಾಗಿದ್ದು, ಗ್ರಾಮೀಣ ಕಸುಬುದಾರರಿಗೆ ತಲ 50 ಸಾವಿರ ರೂಪಾಯಿ ನೆರವು ನೀಡಲಾಗುವುದು. ಪ್ರತಿ ಗ್ರಾಮದಲ್ಲಿ ಎರಡು ಯುವ ಸಂಘಗಳನ್ನು ಗುರುತಿಸಿ ಗ್ರಾಮೀಣ ಯುವಕರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ 5 ಲಕ್ಷ ರೂ. ನೆರವು ನೀಡಲಾಗುವುದು. ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.