ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಸಲವಾಡಿಯಲ್ಲಿ ನಡೆದಿದೆ.
ಕುಮಾರ್ (28) ಶಿವಕುಮಾರ್ (35) ಮೃತ ಕಾರ್ಮಿಕರು. ಘಟನೆಯಲ್ಲಿ ಓರ್ವ ಕಾರ್ಮಿಕ ಸಿದ್ದರಾಜು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕಾಗಲವಾಡಿ ಮೋಳೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.