alex Certify BIG NEWS: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ

ಹಾಸನ: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮಿಕ್ಸಿ ಸ್ಫೋಟಗೊಂಡ ಸ್ಥಳದಲ್ಲಿ ಸುತ್ತಮುತ್ತಲು ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಘಟನಾ ಸ್ಥಳದತ್ತ ಯಾರೂ ಪ್ರವೇಶ ಮಾಡದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ.

ಸ್ಥಳಕ್ಕೆ ಆಂತರಿಕ ಭದ್ರತಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಿಕ್ಸಿ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...