ಬೆಳಗಾವಿ(ಸುವರ್ಣಸೌಧ): ನಿರಂತರ ಯೋಜನೆಯಲ್ಲಿ ಅವ್ಯವಹಾರದ ಬಗ್ಗೆ ಸರ್ಕಾರದ ಗಮನ ಸೆಳೆದ ಬಿಜೆಪಿ ಹಿರಿಯ ಶಾಸಕ ಕೆ.ಎಸ್. ಈಶ್ವರಪ್ಪ ಸರ್ಕಾರದ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಡಳಿತಾರೂಢ ಪಕ್ಷದ ಶಾಸಕ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿ, ಇಂಧನ ಸಚಿವರು ಅಧಿಕಾರಿಗಳು ಕೊಟ್ಟ ಉತ್ತರ ಸದನಕ್ಕೆ ನೀಡಿದ್ದಾರೆ. ಯಾರಾದರೂ ಅದನ್ನೇ ಮಾಡುತ್ತಾರೆ. ಶಿವಮೊಗ್ಗದಲ್ಲಿ ನಿರಂತರ ಯೋಜನೆಯಲ್ಲಿ ಭಾರಿ ಅವ್ಯವಹಾರ ಆಗಿದೆ. ಇದಕ್ಕಾಗಿ ಸದನ ಸಮಿತಿ ರಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ.
ಇಂಧನ ಸಚಿವ ವಿ. ಸುನಿಲ್ ಕುಮಾರ್ ಉತ್ತರ ನೀಡಿ, ಈಗಾಗಲೇ ಅವ್ಯವಹಾರದ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ತನಿಖೆಯಾಗುತ್ತಿದೆ. ಆ ವರದಿಯ ಬಗ್ಗೆ ತೃಪ್ತಿಯ ಆಗದಿದ್ದರೆ ಲೋಕಾಯುಕ್ತಕ್ಕೂ ವಹಿಸಲು ಸಿದ್ಧ. ಇನ್ನೊಂದು ವಾರದಲ್ಲಿ ಅಧಿಕಾರಿಗಳಿಂದ ವರದಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.