alex Certify ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ; ಸಚಿವ ಸೋಮಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ; ಸಚಿವ ಸೋಮಣ್ಣ

ಬೆಳಗಾವಿ: ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಗೊಂಡ ಫಲಾನುಭವಿಗಳಿಗೆ ಜಿಪಿಎಸ್ ಆಧಾರಿತ ಭೌತಿಕ ಪ್ರಗತಿಗನುಗುಣವಾಗಿ ಆಧಾರ್ ಜೋಡಣೆಗೊಂಡ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರೂ.3.12 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಕಳೆದ 03 ವರ್ಷಗಳಿಂದ ಕೊಡಗು ಜಿಲ್ಲೆಗೆ ವಿವಿಧ ವಸತಿ ಯೋಜನೆಯಡಿ ಮಂಜೂರಾಗಿರುವ ಒಟ್ಟು ಮನೆಗಳ ಸಂಖ್ಯೆ ಎಷ್ಟು. ಈ ಪೈಕಿ ಪೂರ್ಣಗೊಂಡಿರುವ ಮತ್ತು ಪ್ರಗತಿಯಲ್ಲಿರುವ ಮನೆಗಳೆಷ್ಟು ವಿವರ ನೀಡುವಂತೆ ಶಾಸಕ ಕೆ.ಜಿ.ಬೋಪಯ್ಯ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ವಸತಿ ಯೋಜನೆಗಳಡಿ ಯಾವುದೇ ಮನೆಗಳನ್ನು ಬ್ಲಾಕ್ ಅಥವಾ ರದ್ದುಗೊಳಿಸಿರುವುದಿಲ್ಲ. ಆದರೆ ಹೆಸರು ಡೂಪ್ಲಿಕೇಟ್ ಆಗಿರುವ ಕಾರಣ ಒಟ್ಟು 20 ಫಲಾನುಭವಿಗಳ ಅನುದಾನ ಬಿಡುಗಡೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಇಂತಹ ಪ್ರಕರಣಗಳಲ್ಲಿ ಡ್ಯೂಪ್ಲಿಕೇಟ್ ತೆರವುಗೊಳಿಸಲು ಆಯಾಯ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಹಂತದಲ್ಲಿಯೇ ಪರಿಶೀಲಿಸಿ ಸರಿಪಡಿಸಲು ಅವಕಾಶ ಕಲ್ಪಿಸಿದ್ದು, ಶಿಫಾರಸ್ಸುಗೊಂಡ ಪ್ರಕರಣಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

2019-20 ರಿಂದ ಇಲ್ಲಿಯವರೆಗೆ ಕೊಡಗು ಜಿಲ್ಲೆಗೆ ವಿವಿಧ ವಸತಿ ಯೋಜನೆಯಡಿ ಒಟ್ಟು 2852  ಮನೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 81 ಮನೆಗಳು ಪೂರ್ಣಗೊಂಡಿದ್ದು, 1008 ಮನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...