ಲಖ್ನೋ: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಐದು ಜನ ಮೃತಪಟ್ಟಿದ್ದಾರೆ. ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ಮವು ಜಿಲ್ಲೆಯ ಶಹಪುರ್ ಗ್ರಾಮದಲ್ಲಿ ಘಟನೆ ನಡೆದಿದೆ. ಮಹಿಳೆ, ಮೂವರು ಅಪ್ರಾಪ್ತರು ಸೇರಿದಂತೆ ಐವರು ಬೆಂಕಿಗಾಹುತಿಯಾಗಿದ್ದಾರೆ. ಕೊಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮವು ಜಿಲ್ಲೆಯ ಕೋಪಗಂಜ್ ಠಾಣೆ ವ್ಯಾಪ್ತಿಯನ ಶಹಪುರ್ ಗ್ರಾಮದಲ್ಲಿ ಮನೆಗೆ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಒಬ್ಬ ಮಹಿಳೆ, ಒಬ್ಬ ವಯಸ್ಕ ಮತ್ತು 3 ಅಪ್ರಾಪ್ತ ವಯಸ್ಕರು ಸೇರಿದಂತೆ ಒಂದೇ ಕುಟುಂಬದ 5 ಸದಸ್ಯರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ, ವೈದ್ಯಕೀಯ ಮತ್ತು ಪರಿಹಾರ ತಂಡಗಳೊಂದಿಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಮವು ಡಿಎಂ ಅರುಣ್ ಕುಮಾರ್ ತಿಳಿಸಿದ್ದಾರೆ.