ಕಲಬುರ್ಗಿ: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕಲಬುರ್ಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಲಬುರ್ಗಿಯ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ತಪಾಸಣೆ ವೇಳೆ 7 ಮೊಬೈಲ್, 1.60 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.