HomeKarnatakaBIG NEWS: ಮಹದಾಯಿ ವಿಚಾರ; ಅನಗತ್ಯ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್; ಸಿಎಂ ಬೊಮ್ಮಾಯಿ ಕಿಡಿ

BIG NEWS: ಮಹದಾಯಿ ವಿಚಾರ; ಅನಗತ್ಯ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್; ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೀಜನೆ ವಿಚಾರದಲ್ಲಿ ಡಿಪಿಆರ್ ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಆದರೂ ಕಾಂಗ್ರೆಸ್ ನಾಯಕರು ಯಾವ ಉದ್ದೇಶಕ್ಕಾಗಿ ಆರೋಪ ಮಾಡುತ್ತಿದ್ದಾರೆ ಗೊತ್ತಿಲ್ಲ. ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹದಾಯಿಗಾಗಿ ನಾವೂ ಹೋರಾಟ ಮಾಡಿದ್ದೆವು, ಅವರೂ ಮಾಡಿದ್ದರು. ಈಗ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. ಹೀಗಿರುವಾಗ ಈ ವೇಳೆ ಲೋಪದೋಷ ಹುಡುಕುವುದು ಅವರ ಮನಸ್ಥಿತಿಯನ್ನು ತೋರುತ್ತದೆ. ಕಾಂಗ್ರೆಸ್ ನಾಯಕರ ಟೀಕೆ, ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳಲ್ಲ. MOF ಕ್ಲಿಯರನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular