HomeKarnatakaBIG NEWS: ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

BIG NEWS: ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆವರೆಗೂ ಚಿಕಿತ್ಸೆಗೆ ಶೀಗಳು ಚೆನ್ನಾಗಿಯೇ ಸ್ಪಂದಿಸುತ್ತಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಜ್ಞಾನಯೋಗಾಶ್ರಮದ ಮೊದಲ ಮಹಡಿಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿ ಎಲ್ ಡಿ ಇ ಮೆಡಿಕಲ್ ಕಾಲೇಜು ಆಸ್ಪತ್ರೆ ವೈದ್ಯರಾದ ಡಾ.ಎಸ್.ಬಿ.ಪಾಟೀಲ್, ಡಾ. ಅರವಿಂದ ಪಾಟೀಲ್, ಡಾ.ಮಲ್ಲಣ್ಣ ಮೂಲಿಮನಿ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇನ್ನೊಂದೆಡೆ ಸಿದ್ದೇಶ್ವರ ಸ್ವಾಮೀಜಿ ದರ್ಶನಕ್ಕಾಗಿ ಭಕ್ತರ ದಂಡೇ ಜ್ಞಾನಯೋಗಾಶ್ರಮದತ್ತ ಹರಿದು ಬರುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular