ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವ ಮೂಲಕ 2023ರ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಬಳ್ಳಾರಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅರುಣಾ ಲಕ್ಷ್ಮಿ ಜನಾರ್ಧನ ರೆಡ್ಡಿ ಅವರನ್ನು ಜನರಿಂದ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ರೆಡ್ಡಿಯವರಿಗೆ ಬಳ್ಳಾರಿ ಜಿಲ್ಲೆಯ ಪ್ರವೇಶ ನಿಷೇಧವಿದೆ. ಅವರ ಬದಲು ನಾನು ಬಳ್ಳಾರಿಯಿಂದ ಪ್ರಚಾರ ಆರಂಭಿಸುತ್ತಿದ್ದೇನೆ. ಬೆಣಕಲ್ ಗ್ರಾಮದ ಪ್ರೀತಿಯನ್ನು ನಾವೆಂದೂ ಮರೆಯಲ್ಲ ಎಂದು ಹೇಳಿದ್ದಾರೆ.
ನೋವು, ಅವಮಾನಗಳಾದರೂ ಜನಾರ್ಧನ ರೆಡ್ದಿ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕಲ್ಯಾಣ ರಾಜ್ಯ ನಿರ್ಮಾಣ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಕರೆ ನೀಡಿದ್ದಾರೆ. ಈ ಮೂಲಕ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಬಳ್ಳಾರಿ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.