
ಅಕ್ಷತಾ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಅಕ್ಷತಾ 8ನೇ ತರಗತಿಯಲ್ಲಿ ಓದುತ್ತಿದ್ದಳು. ಗ್ರಾಮದಲ್ಲಿ ಬಸ್ ವವಸ್ಥೆ ಇಲ್ಲದ ಕಾರಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶಿವನೂರ ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿನಿ ಅಕ್ಷತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದ್ದಾರೆ.

