BIG NEWS: ಹೊಸ ಪಕ್ಷ ಕಟ್ಟಿದ ಜನಾರ್ದನ ರೆಡ್ಡಿಗೆ ಯಡಿಯೂರಪ್ಪ ಬೆಂಬಲ ನೀಡಿಲ್ಲ: ವಿಜಯೇಂದ್ರ

ಗದಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದು ಅವರಿಗೆ ಯಡಿಯೂರಪ್ಪ ಬೆಂಬಲ ಇದೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ನಾಯಕತ್ವದ ಬಗ್ಗೆ ವಿರೋಧ ಪಕ್ಷದವರೂ ಹಲವು ಸಲ ಹೊಗಳಿದ್ದಾರೆ. ಅಂತೆಯೇ ಜನಾರ್ದನ ರೆಡ್ಡಿ ಅವರು ಕೂಡ ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದು, ಹಾಗೆಂದ ಮಾತ್ರಕ್ಕೆ ರೆಡ್ಡಿಯವರಿಗೆ ಯಡಿಯೂರಪ್ಪ ಬೆಂಬಲ ಇದೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಎಂದಿಗೂ ಹಿಂದೆ ನಿಂತು ರಾಜಕಾರಣ ಮಾಡಿದವರಲ್ಲ. ನೇರ ರಾಜಕಾರಣ ಮಾಡುವ ಎದೆಗಾರಿಕೆ ಇರುವ ವ್ಯಕ್ತಿಯಾಗಿದ್ದಾರೆ. ಅವರು ಜನಾರ್ದನ ರೆಡ್ಡಿ ಅವರಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ನಂತರ ವಿಜಯೇಂದ್ರ ಹಿನ್ನೆಲೆಗೆ ಸರಿದಿದ್ದಾರೆ ಎನ್ನುವುದು ಸುಳ್ಳು. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ವಿದೇಶಕ್ಕೆ ಹೋಗುವ ಕಾರ್ಯಕ್ರಮ ಎರಡು ತಿಂಗಳ ಹಿಂದೆಯೇ ತೀರ್ಮಾನವಾಗಿದ್ದರಿಂದ ಕೇಂದ್ರ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಇದರಲ್ಲಿ ಯಾವುದೇ ಗೊಂದಲವು ಇಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read