HomeKarnatakaಮದುವೆ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ: ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು

ಮದುವೆ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ: ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು

ಬೆಂಗಳೂರು: ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ತಡೆಯಲು ಮದುವೆಯ ಕಡ್ಡಾಯ ನೋಂದಣಿಯಾಗಬೇಕು. ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಗದ ಬಳಿ ಬಾಲ್ಯ ವಿವಾಹ ತಡೆಗೆ ಇರುವ ಮಾರ್ಗ ಕೇಳಲಾಗಿದ್ದು, ಇದಕ್ಕೆ ಆಯೋಗ ಪಂಚಾಯಿತಿಗೆ ಮದುವೆ ನೋಂದಣಿ ಅಧಿಕಾರ ನೀಡುವಂತೆ ಶಿಫಾರಸು ಮಾಡಿದೆ. ಪ್ರತಿವರ್ಷ ರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಕರಣ ಹೆಚ್ಚಾಗುತ್ತಿದ್ದು, ಮದುವೆ ನೋಂದಣಿಗೆ ಸೂಚಿಸಿದ್ದರೂ, ಕಡ್ಡಾಯವಾಗಿ ನೋಂದಣಿ ಮಾಡಿಸುತ್ತಿಲ್ಲ. ಅವಶ್ಯಕತೆ ಇದ್ದಾಗ ಮಾತ್ರ ಮದುವೆ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಬಾಲ್ಯ ವಿವಾಹ ಪತ್ತೆ ಕಾರ್ಯ ಕಷ್ಟವಾಗಿದೆ. ಪ್ರಕರಣಗಳ ಸಂಖ್ಯೆ ಭಾರಿ ಹೆಚ್ಚಾಗುತ್ತಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯಲ್ಲಿರುವ ಉಪ ನೋಂದಣಾಧಿಕಾರಿ ಮತ್ತು ವಿವಾಹ ನೋಂದಣಾಧಿಕಾರಿಗಳಿಗೆ ವಿವಾಹ ನೋಂದಣಿ ಅಧಿಕಾರವನ್ನು ನೀಡಲಾಗಿದ್ದು, ನೋಂದಣಿ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿದೆ. ಈ ಕಾರಣದಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಗಳಿಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು. ಮದುವೆ ನೋಂದಣಿಗೆ ವಿವಾಹಿತರಿಬ್ಬರ ವಯಸ್ಸಿನ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular