
ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, ಅಧಿವೇಶನದ ಪೂರ್ವಾರ್ಧ ಫೆಬ್ರವರಿ 10ರ ವರೆಗೆ ನಡೆಯಲಿದೆ. ಬಜೆಟ್ ಅಧಿವೇಶನ ಏಪ್ರಿಲ್ 6ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ.
ಈ ವರ್ಷ ಕರ್ನಾಟಕವೂ ಸೇರಿದಂತೆ ಕೆಲವೊಂದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಕಾರಣ ಹಲವು ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ಇದೆ.

