ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಪಶ್ಚಿಮ ಬಂಗಾಳದ ಮಾಲ್ಡಾ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆದಿದೆ.
4 ದಿನಗಳ ಹಿಂದೆ ಸಂಚಾರ ಆರಂಭಿಸಲಾದ ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ದಾಳಿ ನಡೆದಿರುವುದು ದುರದೃಷ್ಟಕರ ಮತ್ತು ಅನಾರೋಗ್ಯಕರ. ಮಾಲ್ಡಾ ಜಿಲ್ಲೆಯಲ್ಲಿ ಭಾರತದ ಹೆಮ್ಮೆಯ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು ತೂರಲಾಗಿದೆ. ಕೆಲವು ಸಮಾಜ ವಿರೋಧಿ ಶಕ್ತಿಗಳು ಕಲ್ಲು ತೂರಾಟ ನಡೆಸಿದ ನಂತರ ಹೌರಾಕ್ಕೆ ಹೋಗುವ ವಂದೇ ಭಾರತ್ ಎಕ್ಸ್ಪ್ರೆಸ್ನ ಕಿಟಕಿಯ ಗಾಜುಗಳು ಪುಡಿಪುಡಿಯಾಗಿವೆ. ಇದು ಉದ್ಘಾಟನಾ ದಿನದಂದು ‘ಜೈ ಶ್ರೀ ರಾಮ್’ ಘೋಷಣೆಗಳಿಗೆ ಪ್ರತೀಕಾರವೇ? ಎಂದು ಪ್ರಶ್ನಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ತನಿಖೆಗೆ ಒತ್ತಾಯಿಸಿದ್ದಾರೆ.