HomeCrimeBIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

BIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

ಮಂಡ್ಯ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಜಯಲಕ್ಷ್ಮೀ (45) ಮೃತಪಟ್ಟಿದ್ದಾರೆ. ಅವರ ಪತಿ ರಾಮಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಉಳುಮೆ ಮಾಡಿಸುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಗೌಡಯ್ಯ, ಅನಿಲ್, ಗೌಡಯ್ಯ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ. ಗೌಡಯ್ಯ ಹಾಗೂ ರಾಮಕೃಷ್ಣ ಕುಟುಂಬದ ನಡುವೆ ಜಮೀನು ವಿವಾದವಿತ್ತು. ರಾಮಕೃಷ್ಣ ಹಾಗೂ ಅವರ ಪತ್ನಿ ಜಯಲಕ್ಷ್ಮಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಏಕಾಏಕಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜಯಲಕ್ಷ್ಮಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular