HomeKarnatakaBIG NEWS: ಆಟೋ ಪಲ್ಟಿ; 6ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

BIG NEWS: ಆಟೋ ಪಲ್ಟಿ; 6ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ದಾವಣಗೆರೆ: ಕೂಲಿ ಕಾರ್ಮಿಕ ಮಹಿಳೆಯರು ತೆರಳುತ್ತಿದ್ದ ಆಟೋ ಪಲ್ಟಿಯಾಗಿ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಗಾಯಾಳುಗಳನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಣಬೂರಿನಿಂದ ಚಿತ್ರದುರ್ಗದ ಚಿಕ್ಕಪ್ಪನಹಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಮಹಿಳೆಯರು ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋಗಿ ಆಟೋ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿ ಆಟೋ ಪಲ್ಟಿಯಾಗಿ ಬಿದ್ದಿದೆ.

ಜಗಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular