HomeKarnatakaBIG NEWS: ಸಿದ್ದೇಶ್ವರ ಸ್ವಾಮೀಜಿ ಇಚ್ಛೆಯಂತೆಯೇ ಅಂತ್ಯಕ್ರಿಯೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ಮಾಹಿತಿ

BIG NEWS: ಸಿದ್ದೇಶ್ವರ ಸ್ವಾಮೀಜಿ ಇಚ್ಛೆಯಂತೆಯೇ ಅಂತ್ಯಕ್ರಿಯೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಅಂತ್ಯಕ್ರಿಯೆಗೆ ಸರ್ಕಾರದಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಸಂಜೆ 6 ಗಂಟೆಯವರೆಗೂ ಸೈನಿಕ ಶಾಲೆ ಮೈದಾನದಲ್ಲಿ ಅಂತಿಮದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಜ್ಞಾನಯೋಗಾಶ್ರಮದಲ್ಲಿ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದ್ದು, ಶ್ರೀಗಳ ಚಿತೆಗೆ ಬಸವಲಿಂಗ ಶ್ರೀಗಳು ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸುತ್ತೂರು ಶ್ರೀಗಳು, ಕನ್ನೇರಿ ಶ್ರೀಗಳು ಭಾಗಿಯಾಗಲಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಂಗಾಯಿತ ಸಂಪ್ರದಾಯದ ಪ್ರಕಾರ ಪಾರ್ಥಿವ ಶರೀರವನ್ನು ಹೂಳಲಾಗುತ್ತದೆ. ಆದರೆ ಶ್ರೀಗಳ ಇಚ್ಛೆಯಂತೆ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗುವುದು. 2017ರಲ್ಲಿಯೇ ನನ್ನ ಚಿತೆಗೆ ಅಗ್ನಿಸ್ಪರ್ಶ ಮಾಡುವಂತೆ ಶ್ರೀಗಳು ವಿಲ್ ಬರೆದಿದ್ದರು. ಶ್ರೀಗಳ ಇಚ್ಛೆಯಂತೆಯೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular