alex Certify ಸಂಕ್ರಾಂತಿಗಲ್ಲ; ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಡಿ.ಕೆ.ಶಿಗೆ ಪರೋಕ್ಷ ಟಾಂಗ್ ಕೊಟ್ಟ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕ್ರಾಂತಿಗಲ್ಲ; ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಡಿ.ಕೆ.ಶಿಗೆ ಪರೋಕ್ಷ ಟಾಂಗ್ ಕೊಟ್ಟ ಸಿದ್ದರಾಮಯ್ಯ

ವಿಜಯನಗರ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಜನವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಂಕ್ರಾಂತಿಗೆ ಅಲ್ಲ, ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗುವುದು ಎಂದರು. ಈ ಮೂಲಕ ಸಂಕ್ರಾಂತಿಗೆ ಮೊದಲ ಪಟ್ಟಿ ಬಿಡುಗಡೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ರಾಜ್ಯದ 224 ಕ್ಷೇತ್ರಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...