ಮಂಗಳೂರು: ರಸ್ತೆ, ಚರಂಡಿ ಅಭಿವೃದ್ಧಿ ವಿಚಾರವನ್ನು ಬಿಟ್ಟು ಲವ್ ಜಿಹಾದ್ ಬಗ್ಗೆ ಗಮನ ಕೊಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.
ಮಂಗಳೂರಿನಲ್ಲಿ ಬಿಜೆಪಿ ಬೂತ್ ವಿಜಯ ಅಭಿಯಾನದಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಸ್ತೆ, ಚರಂಡಿ ಅಭಿವೃದ್ಧಿ ವಿಚಾರ ಬಿಡಿ. ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ. ಈ ಬಗ್ಗೆ ಚರ್ಚೆ ನಡೆಸುವಂತೆ ಮಾಡಿ ಎಂದು ಹೇಳಿದರು.
ನೀವು ನಿಮ್ಮ ಮಕ್ಕಳ ಭವಿಷ್ಯದ ಚಿಂತೆ ಮಾಡುವುದಾದರೆ, ಲವ್ ಜಿಹಾದ್ ನಿಲ್ಲಿಸಲು ಬಯಸಿದರೆ ನಿಮಗೆ ಬಿಜೆಪಿ ಅಗತ್ಯ. ಬಿಜೆಪಿಯಿಂದ ಮಾತ್ರ ಲವ್ ಜಿಹಾದ್ ತೊಲಗಿಸಲು ಸಾಧ್ಯ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಹೆಚ್ಚುತ್ತದೆ, ಗೋಹತ್ಯೆ, ಧಾರ್ಮಿಕ ಮತಾಂಧರ ವಿರುದ್ಧದ ಕಾನೂನು ಹಿಂಪಡೆಯುತ್ತಾರೆ. ಜನರು ನವ ಕರ್ನಾಟಕದ ನಾಡು ಬೇಕೆ ಅಥವಾ ಭಯೋತ್ಪಾದನೆಯ ನಾಡುಬೇಕೆ ಎಂಬುದನ್ನು ನಿರ್ಧರಿಸಬೇಕು. ಕಾಂಗ್ರೆಸ್ ಭಯೋತ್ಪಾದಕರ ಪಕ್ಷ, ಡಿ.ಕೆ.ಶಿವಕುಮಾರ್ ಸಿಎಂ ಆದರೆ ಭಯೋತ್ಪಾದಕರಿಗೆ ಫೀಲ್ಡ್ ಡೇ ಆಗುತ್ತದೆ ಎಂದು ಹೇಳಿದ್ದಾರೆ.