ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರಿಗೆ ಕಾಲಾವಕಾಶ ವಿಸ್ತರಣೆ

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆಯಲು ಸಮಯಾವಕಾಶ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸಿದ್ದೇಶ್ವರ ಶ್ರೀಗಳ ಪಾರ್ಥಿವಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಭಕ್ತರಿಗಾಗಿ ಶ್ರೀಗಳ ಅಂತಿಮ ದರ್ಶನಕ್ಕೆ ಹೆಚ್ಚುವರಿಯಾಗಿ 2-3 ಗಂಟೆಯವರೆಗೆ ಕಾಲಾವಕಾಶ ವಿಸ್ತರಿಸುತ್ತೇವೆ. ಜಿಲ್ಲಾಡಳಿತಕ್ಕೆ ಎಲ್ಲಾ ಭಕ್ತರು ಸಹಕಾರ ನೀಡಬೇಕು ಎಂದರು.

ಸಂಜೆ 5:15ಕ್ಕೆ ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ಸರ್ಕಾರಿ ಗೌರವದ ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಶಾಂತಿಯುತವಾಗಿ ಭಕ್ತರು ಅಂತಿಮ ದರ್ಶನ ಪಡೆಯಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read