ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೊಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೆಲ ತಿಂಗಳ ಹಿಂದೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.