ಹೆಣ್ಣೊಬ್ಬಳು ವಿವಾಹಿತೆ ಎಂದು ಸೂಚಿಸುವುದು ತಾಳಿ ಮತ್ತು ಕಾಲ್ಬೆರಳಿನ ಉಂಗುರಗಳಿಂದ. ಕಾಲುಂಗುರ ಕೇವಲ ಪಾದಗಳ ಸೌಂದರ್ಯಕ್ಕಾಗಿ ಮಾತ್ರವಲ್ಲ, ಕಾಲುಂಗುರ ಧರಿಸುವುದರ ಹಿಂದೆ ವೈಜ್ಞಾನಿಕ ಕಾರಣವಿದೆ.
ಕಾಲುಂಗುರಗಳನ್ನು ಯಾವಾಗಲೂ ಬಲ ಮತ್ತು ಎಡ ಪಾದಗಳ ಎರಡನೆಯ ಬೆರಳುಗಳಿಗೇ ಧರಿಸಿರುವುದನ್ನು ನೀವು ಗಮನಿಸಿರಬಹುದು. ಇದು ಗರ್ಭಾಶಯವನ್ನು ನಿಯಂತ್ರಿಸುತ್ತದೆ ಮತ್ತು ಗರ್ಭಾಶಯಕ್ಕೆ ಸಮಪ್ರಮಾಣದ, ಸಂತುಲಿತ ರಕ್ತದೊತ್ತಡವನ್ನು ನಿರ್ವಹಿಸುವುದರ ಮೂಲಕ ಅದರ ಆರೋಗ್ಯವನ್ನು ಕಾಪಾಡುತ್ತದೆ.
ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ.