ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ, ಇನ್ನೂ ಆಗಿಲ್ಲ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದು ಹೇಳಿದ್ದಾರೆ
ರಸ್ತೆ ಚರಂಡಿ ವಿಚಾರ ಬಿಡಿ, ಲವ್ ಜಿಹಾದ್ ಬಗ್ಗೆ ಗಮನ ಕೊಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಯ ಬಗ್ಗೆ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿ, ನಳಿನ್ ಕುಮಾರ್ ಕಟೀಲು ಅವರ ಹೇಳಿಕೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ. ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣಾ ಅಜೆಂಡಾ ಸಿದ್ದವಾಗಿದೆ ಎಂದು ಹೇಳಿದ್ದಾರೆ.