ಬೆಳಗಾವಿ: ಬೆಳಗಾವಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಸಮೀಪ ಘಟನೆ ನಡೆದಿದೆ.
ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ಭಕ್ತರು ಸಾವನ್ನಪ್ಪಿದ್ದಾರೆ. ಇಂದಿರವ್ವ, ಮಾರುತಿ, ಹನುಮವ್ವ, ದೀಪಾ, ಸುಪ್ರೀತಾ ಸೇರಿ 6 ಜನ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೇವಾಲಯಕ್ಕೆ ನಡೆದುಕೊಂಡು ಹೋಗುತ್ತಿದ್ದ ಇವರನ್ನು ವಾಹನ ಚಾಲಕ ಹತ್ತಿಸಿಕೊಂಡಿದ್ದಾನೆ. ಚುಂಚನೂರ ಬಳಿ ವಾಹನ ನಿಯಂತ್ರಣ ತಪ್ಪಿ ಆಲದ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.