HomeIndiaತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಮಾನ ತುರ್ತು ಭೂಸ್ಪರ್ಶ

ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಮಾನ ತುರ್ತು ಭೂಸ್ಪರ್ಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಮಾನ ಬುಧವಾರ ರಾತ್ರಿ ಗುವಾಹಟಿಯ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೊಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಅಗರ್ತಲಾಕ್ಕೆ ತೆರಳುತ್ತಿದ್ದ ಗೃಹ ಸಚಿವರು ಪ್ರತಿಕೂಲ ಹವಾಮಾನದ ಕಾರಣದಿಂದ ಇಳಿಯಲು ಸಾಧ್ಯವಾಗಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುವಾಹಟಿಯ ಹೋಟೆಲ್ ರಾಡಿಸನ್ ಬ್ಲೂನಲ್ಲಿ ಅಮಿತ್ ಶಾ ರಾತ್ರಿಯನ್ನು ಕಳೆದಿದ್ದಾರೆ. ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆಗಾಗಿ ರಥಯಾತ್ರೆ ಉದ್ಘಾಟಿಸಲು ಗುರುವಾರ ಬೆಳಿಗ್ಗೆ ಅಗರ್ತಲಾಗೆ ತೆರಳಲಿದ್ದಾರೆ.

ಸಚಿವ ಅಮಿತ್ ಶಾ ಗುವಾಹಟಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದರು. ಅವರನ್ನು ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ ಬರಮಾಡಿಕೊಂಡರು. ಶಾ ರಾತ್ರಿಯೇ ಅಗರ್ತಲಾ ತಲುಪಬೇಕಿತ್ತು. ಆದರೆ ಅಗರ್ತಲಾದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಅವರ ವಿಮಾನವು 10:45 ರ ಸುಮಾರಿಗೆ ಗುವಾಹಟಿಯಲ್ಲಿ ಇಳಿಯಬೇಕಾಯಿತು.

ಬಿಜೆಪಿಯ “ಜನ ಬಿಸ್ವಾಸ್ ರಥ ಯಾತ್ರೆ”ಗೆ ಚಾಲನೆ ನೀಡಲಿರುವ ಅಮಿತ್ ಶಾ ನಂತರ ಧರ್ಮನಗರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular