HomeIndiaBIG NEWS: ಹೊಸ ರೂಪಾಂತರಿ ವೈರಸ್ ಆತಂಕ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಪ್ರಕರಣವೆಷ್ಟು? ಇಲ್ಲಿದೆ...

BIG NEWS: ಹೊಸ ರೂಪಾಂತರಿ ವೈರಸ್ ಆತಂಕ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಪ್ರಕರಣವೆಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 188 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,710 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,554 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,46,055 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 61,828 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,12,33,762 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,93,051 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular