HomeKarnatakaBIG NEWS: ಕೋರ್ಟ್ ಗೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಸಾವು

BIG NEWS: ಕೋರ್ಟ್ ಗೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಸಾವು

ಬೆಂಗಳೂರು: ಕೋರ್ಟ್ ಗೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ ಘಟನೆ ಬೆಂಗಳುರಿನ ಕಾಟನ್ ಪೇಟೆ ಪೊಲಿಸ್ ಠಾಣೆಯಲ್ಲಿ ನಡೆದಿದೆ.

ವಿನೋದ್ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಆರೋಪಿ. 2017ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ವಿನೋದ್ ನಾಪತ್ತೆಯಾಗಿದ್ದ. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕೋರ್ಟ್, ಆರೋಪಿ ವಿನೋದ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಈ ಪ್ರಕರಣ ಸಂಬಂಧ ನಿನ್ನೆ ವಿನೋದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಕೋರ್ಟ್ ಗೆ ಹಾಜರು ಪಡಿಸಲು ಸಿದ್ಧತೆ ನಡೆಸಿದ್ದರು. ಆದರೆ ಆರೋಪಿ ವಿನೋದ್ ಕೋರ್ಟ್ ಗೆ ಹಾಜರಾಗುವ ಮುನ್ನವೇ ಠಾಣೆಯಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular