HomeKarnatakaBIG NEWS: ವಿಧಾನಸೌಧದಲ್ಲಿ ಅನಧಿಕೃತ ಹಣ ಪತ್ತೆ ವಿಚಾರ; ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು...

BIG NEWS: ವಿಧಾನಸೌಧದಲ್ಲಿ ಅನಧಿಕೃತ ಹಣ ಪತ್ತೆ ವಿಚಾರ; ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ?

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಆ ಹಣ ಯಾರದ್ದು ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡುವೆ ನಾನು ಮಾತನಾಡೋಕೆ ಹೋಗಲ್ಲ. ತನಿಖೆ ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ನಡೆಯುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖೆಯಿಂದ ಏನು ಗೊತ್ತಾಗುತ್ತದೆ ಅದರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular